Daily Horoscope

ಸಿಎಂ ಸಿದ್ದರಾಮಯ್ಯ ಬಂದು ಹೋದ ಬೆನ್ನಲ್ಲೇ ಸಂಡೂರಿನಲ್ಲಿ ಬಿಜೆಪಿ ಅಬ್ಬರ

Krishnaveni K
ಶುಕ್ರವಾರ, 8 ನವೆಂಬರ್ 2024 (16:15 IST)
ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ ಇಂದು ಬೊಮ್ಮಘಟ್ಟದಲ್ಲಿ ನಡೆದ ಭರ್ಜರಿ ಪ್ರಚಾರ ಸಭೆ ಯಶಸ್ವಿಯಾಗಿ ನೆರವೇರಿತು. ಸಿಎಂ ಬಂದು ಹೋದ ಬೆನ್ನಲ್ಲೇ ಬಿಜೆಪಿ ಕೂಡಾ ಇಂದು ಭರ್ಜರಿ ಪ್ರಚಾರ ನಡೆಸಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಜನಾರ್ಧನ ರೆಡ್ಡಿ, ಶ್ರೀರಾಮುಲು ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಇಂದು ತೆರೆದ ವಾಹನದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

4 ಬಾರಿ ಶಾಸಕರಾಗಿ ಒಂದು ಬಾರಿ ಸಂಸದರಾದ ತುಕಾರಾಮ್ ಅವರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಎನ್ನುವುದು ಕನಸಿನ ಮಾತಾಗಿದ್ದು, ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು  ಜನತೆಯ ಮನೆ ಮನೆಗೆ ಮೂಲಭೂತ ಸೌಕರ್ಯಗಳನ್ನು ಕೊಂಡೊಯ್ಯಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ಪ್ರಚಾರ ಭಾಷಣ ಮಾಡಿದ್ದರು. ಈ ವೇಳೆ ರೆಡ್ಡಿ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದರು. ರೆಡ್ಡಿ ಮತ್ತು ಪಟಾಲಂ ಈ ಹಿಂದೆ ಬಳ್ಳಾರಿಯನ್ನು ತಮ್ಮದೇ ಅಡ್ಡಾ ಮಾಡಿಕೊಂಡಿದ್ದರು. ಇನ್ನು ಮುಂದೆ ಅವರು ಇಲ್ಲಿ ತಲೆ ಎತ್ತದಂತೆ ಮಾಡಬೇಕು ಎಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments