Publish Date: Sat, 10 Feb 2018 (20:18 IST)
Updated Date: Sat, 10 Feb 2018 (20:20 IST)
ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಕನಸು ಮಾತ್ರ ಅದು ಈಡೇರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸಪೇಟೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಕೋಮುವಾದದ ಮೂಲಕ ರಾಜ್ಯದಲ್ಲಿ ಅಧಿಕಾರ ಹಿಡಿಯಬೇಕು ಎಂಬ ಬಿಜೆಪಿಯವರ ಕನಸು ನನಸಾಗದು ಎಂದಿದ್ದಾರೆ.
ರಾಜ್ಯಕ್ಕೆ ಬಂದಿದ್ದ ನರೇಂದ್ರ ಮೋದಿ ಅವರು ಮಹಾದಾಯಿ ನೀರಿನ ವಿವಾದವನ್ನು ಪ್ರಸ್ತಾಪಿಸದೆ ಆಧಾರ ರಹಿತವಾದ ಆರೋಪಗಳನ್ನು ಮಾಡಿ ಹೋಗಿದ್ದಾರೆ. ಅವರು ದೇಶದ ಪ್ರಧಾನಿಯಾಗಲು ಅರ್ಹರಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿ ವಿರುದ್ಧ ಎಂದಿನ ಶೈಲಿಯಂತೆ ವಾಗ್ದಾಳಿ ನಡೆಸಿದ ಅವರು ಬಿಜೆಪಿ ಆಡಳಿತದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಮೂಲಕ ಬಳ್ಳಾರಿ ರಿಪಬ್ಲಿಕ್ ಬಳ್ಳಾರಿ ಎಂಬ ಕಳಂಕವನ್ನು ಹೊಂದಿತ್ತು. ಈ ಕಳಂಕ ತೊಡೆದು ಹಾಕಲು ಕಾಂಗ್ರೆಸ್ ಶ್ರಮಿಸಿದೆ. ಭಯದ ವಾತಾವರಣ ದೂರ ಮಾಡಲು ಬಳ್ಳಾರಿಗೆ ಪಾದಯಾತ್ರೆ ನಡೆಸಲಾಯಿತು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.