Daily Horoscope
✕

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

Krishnaveni K
ಸೋಮವಾರ, 4 ಆಗಸ್ಟ್ 2025 (14:53 IST)
ಬೆಂಗಳೂರು: ಮತ ಕಳ್ಳತನವಾಗುತ್ತಿದೆ ಎಂದು ಆರೋಪಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ರದ್ದಾಗುತ್ತಿದ್ದಂತೇ ಇತ್ತ ಬಿಜೆಪಿ ಕೂಡಾ ಪ್ರತಿಭಟನೆ ಕ್ಯಾನ್ಸಲ್ ಮಾಡಿಕೊಂಡಿದೆ.

ನಾಳೆ ಫ್ರೀಡಂ ಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ  ವಿರುದ್ಧ ಮತಗಳ್ಳತನ ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕಾಗಿ ಎಲ್ಲಾ ಸಿದ್ಧತೆಗಳೂ ನಡೆದಿದ್ದವು.

ಆದರೆ ಜಾರ್ಖಂಡ್ ನಲ್ಲಿ ಮಾಜಿ ಸಿಎಂ ಶಿಬು ಸೊರೇನ್ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದಲ್ಲಿ ಭಾಗಿಯಾಗಲು ರಾಹುಲ್ ಸೇರಿದಂತೆ ಕಾಂಗ್ರೆಸ್ ನಾಯಕರು ತೆರಳಲಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಅತ್ತ ಕಾಂಗ್ರೆಸ್ ಸಮಾವೇಶ ರದ್ದಾಗುತ್ತಿದ್ದಂತೇ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯೂ ಕ್ಯಾನ್ಸಲ್ ಆಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಮಾಹಿತಿ ನೀಡಿದ್ದಾರೆ. ರಾಹುಲ್ ಪ್ರತಿಭಟನೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ಮುಂದಿನ ಸುದ್ದಿ
Show comments