Select Your Language

Notifications

webdunia
webdunia
webdunia
webdunia

ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ; ಡಿಕೆ ಶಿವಕುಮಾರ್ ಸಹೋದರರ ಮೇಲೆ ಗರಂ ಆದ ಬಿಎಸ್ ವೈ

ಚುನಾವಣಾ ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ; ಡಿಕೆ ಶಿವಕುಮಾರ್ ಸಹೋದರರ ಮೇಲೆ ಗರಂ ಆದ ಬಿಎಸ್ ವೈ
ಶಿವಮೊಗ್ಗ , ಗುರುವಾರ, 1 ನವೆಂಬರ್ 2018 (12:52 IST)
ಶಿವಮೊಗ್ಗ : ರಾಮನಗರದ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದು, ಮತ್ತೆ ಕಾಂಗ್ರೆಸ್ ಸೇರಲಿದರುವುದರ ಬಗ್ಗೆ ಇದೀಗ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಲ್. ಚಂದ್ರಶೇಖರ್ ಅವರನ್ನು ಸಚಿವ ಡಿಕೆ ಶಿವಕುಮಾರ್ ಸಹೋದರರು ದುಡ್ಡುಕೊಟ್ಟು ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಡಿಕೆಶಿ ದುಡ್ಡು ಕೊಟ್ಟು ಖರೀದಿ ಮಾಡಿದ್ದಾರೆ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದ ಹೇಳಿದ್ದಾರೆ.ಆದರೆ ರಾಮನಗರ ಅಭ್ಯರ್ಥಿ ಬಿಜೆಪಿ ಸೇರ್ಪಡೆ ಆಗಿರುವುದು ಪಕ್ಷದ ಮೇಲೆ ಹಾಗೂ ಉಪಚುನಾವಣೆ ಮೇಲೆ ಪರಿಣಾಮ ಬೀರುತ್ತಾ ಎಂಬ ಪ್ರಶ್ನೆಗೆ ಗರಂ ಆದ ಬಿಎಸ್‍ವೈ ಉತ್ತರಿಸದೆ ಮೈಕ್ ತಳ್ಳಿ ಹೋಗಿದ್ದಾರೆ.

ಆನಂತರ ಮಾತನಾಡಿದ ಅವರು,’ ಚಂದ್ರಶೇಖರ್ ಮೇಲೆ ಒಂದುವಾರದಿಂದ ಅನುಮಾನವಿತ್ತು. ಆದ್ದರಿಂದ ಅವರ ಪರವಾಗಿ ಪ್ರಚಾರಕ್ಕೆ ಹೋಗಿರಲಿಲ್ಲ. ಚಂದ್ರಶೇಖರ್ ಹಿಂದೆ ಸರಿದಿರುವುದರಿಂದ ಪಕ್ಷಕ್ಕೆ ಯಾವುದೇ ತೊಂದರೆ ಇಲ್ಲ. ಸಿಎಂ ಕುಮಾರಸ್ವಾಮಿ ಕುತಂತ್ರದಿಂದ ಅವರು ಬಿಜೆಪಿ ತೊರೆದಿದ್ದಾರೆ’ ಎಂದು ಹೇಳಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭಾಷಯ ಕೋರಿದ ಪ್ರಧಾನಿ ಮೋದಿ