ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಕೆ

ಮಂಗಳವಾರ, 30 ಜುಲೈ 2019 (11:11 IST)
ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇದೀಗ ಆ ಸ್ಥಾನಕ್ಕೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈಗಾಗಲೇ  ಸಿಎಂ ಯಡಿಯೂರಪ್ಪ ಅವರು ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ನಾಮಪತ್ರ ಸಲ್ಲಿಸುವಂತೆ ಸೂಚಿಸಿದ್ದರು. ಆದರೆ ಇದೀಗ ದಿಢೀರ್ ಅಭ್ಯರ್ಥಿ ಬದಲಾವಣೆ ಮಾಡಿದ ಸಿಎಂ ಯಡಿಯೂರಪ್ಪ ಅವರು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ನಾಮಪತ್ರ ಸಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.


ಹಾಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ ಶಿರಸಿ ಕ್ಷೇತ್ರದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಬೆಳಗ್ಗೆ 11.30 ಕ್ಕೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಸಿದ್ದಾರ್ಥ್ ಪತ್ತೆಗೆ ಕೇಂದ್ರದ ನೆರವು ಕೋರಿದ ರಾಜ್ಯ ಸಂಸದರು