Publish Date: Thu, 07 Sep 2017 (10:14 IST)
Updated Date: Thu, 07 Sep 2017 (10:16 IST)
ಮಂಗಳೂರು: ಕರಾವಳಿಯಲ್ಲಿ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಮಂಗಳೂರು ಚಲೋ ಹಮ್ಮಿಕೊಂಡಿದ್ದು, ಜ್ಯೋತಿ ವೃತ್ತದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ.
ರ್ಯಾಲಿ ನಡೆಸಲು ಅನುಮತಿ ಇಲ್ಲದಿದ್ದರೂ ಮಂಗಳೂರಿನ ಜ್ಯೋತಿ ಸರ್ಕಲ್ ನಲ್ಲಿ ವೇದಿಕೆ ನಿರ್ಮಿಸಲಾಗಿದ್ದು, ಜಾಥಾ ನಡೆಸಲು ಸಾವಿರಾರು ಮಂದಿ ಸೇರಿದ್ದಾರೆ. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಆಗಮನಕ್ಕಾಗಿ ಕಾರ್ಯಕರ್ತರು ಕಾದಿದ್ದಾರೆ.
ನೆಹರೂ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿಯಿದೆ. ಆದರೆ ಬೈಕ್ ರ್ಯಾಲಿ ನಡೆಸಲು ಅನುಮತಿಯಿಲ್ಲ. ಹಾಗಿದ್ದರೂ, ಬಿಜೆಪಿ ಕಾರ್ಯಕರ್ತರು ತಮ್ಮ ಬೇಡಿಕೆ ಮುಂದಿಟ್ಟು ರ್ಯಾಲಿ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ.