Select Your Language

Notifications

webdunia
webdunia
webdunia
webdunia

ಇಂದು ರಾಜ್ಯಕ್ಕೆ ಆಗಮಿಸಲಿರುವ ಬಿಜೆಪಿ ಚಾಣಕ್ಯ ಅಮಿತ್ ಶಾ

ಇಂದು ರಾಜ್ಯಕ್ಕೆ ಆಗಮಿಸಲಿರುವ ಬಿಜೆಪಿ ಚಾಣಕ್ಯ ಅಮಿತ್ ಶಾ
ಬೆಂಗಳೂರು , ಗುರುವಾರ, 21 ಫೆಬ್ರವರಿ 2019 (11:37 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.


ಅಮಿತ್ ಶಾ ಆಂಧ್ರ ಪ್ರದೇಶ, ಕರ್ನಾಟಕ ಹಾಗು ತಮಿಳುನಾಡಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಂಗಳೂರಿಗೆ ಬರುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 3.40ಕ್ಕೆ ದೇವನಹಳ್ಳಿಯ ಅವತಿಯ ಸಾಯಿ ಗಾರ್ಡನ್ ನಲ್ಲಿರುವ ಶಕ್ತಿಕೇಂದ್ರದ ಸಮಾವೇಶದಲ್ಲಿ ಭಾಗವಹಿಸಿ, ಸಂಜೆ 5.45ಕ್ಕೆ ಯಲಹಂಕದಲ್ಲಿರುವ ರೆಸಾರ್ಟ್‍ನಲ್ಲಿ ಶಾಸಕರು, ಸಂಸದರ ಸಭೆ ನಡೆಸಲಿದ್ದಾರೆ.


ಸಂಜೆ 7.15 ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಿದ್ದು, ರೆಸಾರ್ಟ್‍ನಲ್ಲಿಯೇ ರಾತ್ರಿ 9 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ, ರೆಸಾರ್ಟ್‍ನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ನಂತರ ಫೆ.22 ರಂದು ಬೆಳಗ್ಗೆ 9.30ಕ್ಕೆ ತಮಿಳುನಾಡಿನ ಮಧುರೈಗೆ ಪ್ರವಾಸ ಕೈಗೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಗಣೇಶ್ ಹಾಗೂ ಆನಂದ್ ಸಿಂಗ್ ರಾಜಿ ಸಂಧಾನದ ಬಗ್ಗೆ ನನ್ನ ಬಳಿ ಕೇಳಬೇಡಿ ಎಂದ ಡಿಸಿಎಂ ಪರಮೇಶ್ವರ್