Webdunia - Bharat's app for daily news and videos

Install App

ಬಿಜೆಪಿ ಕೋರ್ ಕಮಿಟಿ ಸಭೆ ಮುಕ್ತಾಯ: ಹಲವು ನಿರ್ಣಯ

Webdunia
ಭಾನುವಾರ, 6 ಸೆಪ್ಟಂಬರ್ 2015 (12:09 IST)
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಬಿಬಿಎಂಪಿ ಗದ್ದುಗೆ ಏರಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಮುಖಂಡರು ನಗರದ ಮಲ್ಲೇಶ್ವರಂ ನಲ್ಲಿರುವ ತಮ್ಮ ಪಕ್ಷದ ಮುಖ್ಯ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಸುತ್ತಿದ್ದಾರೆ.  
 
ಒಂದೂವರೆ ಗಂಟೆಯ ಕಾಲ ನಡೆದ ಈ ಸಭೆಯಲ್ಲಿ ಬಿಬಿಎಂಪಿ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ವಿರುದ್ಧ ಕಾನೂನು ಸಮರ ನಡೆಸುವ ಹಾಗೂ ಪ್ರತಿಭಟನೆಯನ್ನು ಮುಂದುವರಿಸುವ ಮುಂದಿನ ಎಲ್ಲಾ ರಣತಂತ್ರಗಳ ಬಗ್ಗೆ ಹಾಗೂ ಮೈಸೂರು ರೈತ ಚೈತನ್ಯ ಯಾತ್ರೆ ಸಮಾರೋಪ ಸಮಾರಂಭವನ್ನು ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಲಾಗಿದ್ದು, ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ. 
 
ಸಭೆಯು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಿದ್ದು, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದಗೌಡ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಷಿ, ಬಿಜೆಪಿಯ ವಿಧಾನಸಭಾ ನಾಯಕ ಜಗದೀಶ್ ಶೆಟ್ಟರ್ ಶಾಸಕ ಆರ್.ಅಶೋಕ್ ಹಾಗೂ ಬಿಬಿಎಂಪಿಯ ನೂತನ ಕಾರ್ಪೊರೇಟರ್‌ಗಳು ಭಾಗವಹಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments