Publish Date: Thu, 25 Apr 2019 (11:20 IST)
Updated Date: Thu, 25 Apr 2019 (11:26 IST)
ಬಿಜೆಪಿ ಕೋರ್ ಕಮಿಟಿ ಸಭೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಆರಂಭಗೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ಶುರುವಾಗಿದೆ. ಸಭೆಯಲ್ಲಿ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಘೋಷಣೆಯಿಂದ ಉಂಟಾಗಿರುವ ರಾಜಕೀಯ ಅಸ್ತಿರತೆಯ ಲಾಭ ಪಡೆಯುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತಿದೆ.