Select Your Language

Notifications

webdunia
webdunia
webdunia
webdunia

ದಿಯುವಿನಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ

BJP created history in Diu
bangalore , ಸೋಮವಾರ, 11 ಜುಲೈ 2022 (21:28 IST)
ಪಶ್ಚಿಮ ಭಾರತದಲ್ಲಿರುವ ದಿಯು ಮತ್ತು ದಮನ್​ಗಳ ಪೈಕಿ ದಿಯು ಮುನ್ಸಿಪಲ್ ಕೌನ್ಸಿಲ್‌ಗೆ ಇದೇ 7ರಂದು ಚುನಾವಣೆ ನಡೆದಿತ್ತು. ಅಚ್ಚರಿಯ ರೀತಿಯಲ್ಲಿ ಚುನಾವಣೆ ನಡೆದ ಒಟ್ಟೂ 13 ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕಗೆ ಹಾಕಿಕೊಂಡಿದೆ. ಒಂದೇ ಒಂದು ಕ್ಷೇತ್ರವನ್ನೂ ಗೆಲ್ಲಲು ಕಾಂಗ್ರೆಸ್​ಗೆ ಸಾಧ್ಯವಾಗದೇ ಭಾರಿ ಮುಖಭಂಗ ಅನುಭವಿಸಿದೆ. ಬಿಜೆಪಿ 6 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು. ಆದರೆ, ಉಳಿದ ಏಳು ಸ್ಥಾನಕ್ಕೆ ಜುಲೈ 7 ರಂದು ಚುನಾವಣೆ ನಡೆದು, ಈಗ ಫಲಿತಾಂಶ ಹೊರಬಿದ್ದಿದೆ. ಒಂದೂವರೆ ದಶಕದ ನಂತರ ಕೌನ್ಸಿಲ್‌ ಅಧಿಕಾರ ಬಿಜೆಪಿ ಪಾಲಾಗಿದೆ. ಇಷ್ಟೇ ಅಲ್ಲದೇ ಎಲ್ಲಾ ಕ್ಷೇತ್ರಗಳನ್ನು ಒಂದೇ ಪಕ್ಷ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ಸೃಷ್ಟಿಸಿದೆ ಎಂದು ತಿಳಿದುಬಂದಿದೆ. ಮತದಾರರು ತುಷ್ಟೀಕರಣ ರಾಜಕಾರಣವನ್ನು ತಿರಸ್ಕರಿಸಿ ಅಭಿವೃದ್ಧಿಯ ರಾಜಕೀಯವನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿ ಮತ್ತಷ್ಟು ಅಭಿವೃದ್ಧಿಗೊಳಿಸಲು ಸಹಕರಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು. ಜನರು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಇಟ್ಟಿರುವ ಅಪಾರ ಪ್ರೀತಿಯಿಂದಲೇ ಇದು ಸಾಧ್ಯವಾಯಿತು ಎಂದು ಬಿಜೆಪಿ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಕೊಡಗು-ಕರಾವಳಿಗೆ ಸಿಎಂ ಭೇಟಿ