ಮತಗಳ್ಳತನ ಆರೋಪ ಮಾಡಿ ದೂರು ಕೊಡದ ರಾಹುಲ್ ಗಾಂಧಿ ಹೇಡಿ ಎಂದ ಬಿಜೆಪಿ

Krishnaveni K
ಶನಿವಾರ, 9 ಆಗಸ್ಟ್ 2025 (10:08 IST)
ಬೆಂಗಳೂರು: ನಿನ್ನೆ ಬೆಂಗಳೂರಿನಲ್ಲಿ ಮತಗಳ್ಳತನವಾಗಿದೆ ಎಂದು ಬೃಹತ್ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ಚುನಾವಣಾ ಆಯೋಗಕ್ಕೆ ದೂರು ಕೊಡದೇ ದೆಹಲಿಗೆ ತೆರಳಿದ್ದರು. ಇದಕ್ಕೆ ಬಿಜೆಪಿ ಟಾಂಗ್ ಕೊಟ್ಟಿದ್ದು ದೂರು ಕೊಡದೇ ಓಡಿ ಹೋದ ಹೇಡಿ ಎಂದು ವ್ಯಂಗ್ಯ ಮಾಡಿದೆ.

ಫ್ರೀಡಂ ಪಾರ್ಕ್ ನಲ್ಲಿ ನಿನ್ನೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಿತು. ಈ ವೇಳೆ ರಾಹುಲ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆ ವೇಳೆ ನಕಲಿ ಮತದಾರರು ಸಾಕಷ್ಟು ಸಂಖ್ಯೆಯಲ್ಲಿದ್ದರು. ಅದರಿಂದಲೇ ನಮಗೆ ಸೋಲಾಗಿದೆ. ಮೋದಿ ಕಳ್ಳಾಟದಿಂದ ಪ್ರಧಾನಿಯಾಗಿದ್ದಾರೆ ಎಂದು ರಾಹುಲ್ ಸೇರಿದಂತೆ ಎಲ್ಲಾ ನಾಯಕರೂ ಆರೋಪಿಸಿದ್ದರು. ಸಮಾವೇಶದ ಬಳಿಕ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗಕ್ಕೆ ದೂರು ಕೊಡಬೇಕಿತ್ತು.

ಆದರೆ ದೂರು ಕೊಡುವಾಗ ರಾಹುಲ್ ಇರಲಿಲ್ಲ. ಅಷ್ಟರಲ್ಲಾಗಲೇ ಅವರು ದೆಹಲಿ ವಿಮಾನ ಏರಿಯಾಗಿತ್ತು. ಕೇವಲ ಡಿಕೆ ಶಿವಕುಮಾರ್ ಮತ್ತು ಸಂಗಡಿಗರು ಮಾತ್ರ ಚುನಾವಣಾ ಆಯೋಗದ ಕಚೇರಿಗೆ ತೆರಳಿ ದೂರು ನೀಡಿದರು. ಇದರ ಬಗ್ಗೆ ಬಿಜೆಪಿ ತೀವ್ರ ಟೀಕೆ ನಡೆಸಿದೆ.

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಮತಗಳ್ಳತನವಾಗಿದೆ ಎಂದು ಸುಳ್ಳು ಆರೋಪ ಮಾಡಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಬಳಿಕ ಯಾವುದೇ ದೂರು ದಾಖಲಿಸದೆ ಹೇಡಿಯಂತೆ ಪಲಾಯನಗೈದ ಉತ್ತರಕುಮಾರ ರಾಹುಲ್‌ ಗಾಂಧಿ ಎಂದು ಬಿಜೆಪಿ ಟೀಕೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments