Publish Date: Fri, 13 Oct 2017 (15:59 IST)
Updated Date: Fri, 13 Oct 2017 (16:07 IST)
ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ಅಸಭ್ಯ ಪದಗಳನ್ನು ಬಳಸಿ ಟೀಕಿಸಿದ್ದರಿಂದ ಕೂಡಲೇ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವರು ಅವಹೇಳನಕಾರಿ ಹೇಳಿಕೆ ನೀಡಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರೋಷನ್‌ಬೇಗ್‌ರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಯಾವ ರೀತಿ ವರ್ತಿಸಬೇಕು ಎನ್ನುವ ಬಗ್ಗೆ ಸಚಿವರಿಗೆ ಸಲಹೆ ನೀಡಲಿ ಎಂದು ಕಿಡಿಕಾರಿದ್ದಾರೆ.
ಸಚಿವ ರೋಷನ್‌ಬೇಗ್ ರಾಜೀನಾಮೆ ನೀಡದಿದ್ದರೆ ಅವರ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.