Publish Date: Fri, 12 Jan 2018 (17:31 IST)
Updated Date: Fri, 12 Jan 2018 (17:33 IST)
ಬಿಜೆಪಿ ಪಕ್ಷ ಒಡೆದ ಮನೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದರೆ, ಜೆಡಿಎಸ್ ದುರ್ಬಲ ಪಕ್ಷವಾಗಿದೆ. ಇದರಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶಗಳಲ್ಲಿನ ಕಪ್ಪು ಹಣವನ್ನು ತಂದು ಜನರಿಗೆ ಹಂಚುವುದಾಗಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ನೀಡಿದ್ದ ಭರವಸೆಗಳು ಸುಳ್ಳಾಗಿದ್ದು, ಕಾಂಗ್ರೆಸ್ ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 150 ಭರವಸೆಗಳನ್ನು ಈಡೇರಿಸಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.