Publish Date: Fri, 08 Dec 2017 (09:44 IST)
Updated Date: Fri, 08 Dec 2017 (09:47 IST)
ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಕೇವಲ ವದಂತಿ ಎಂದು ಮಾಜಿ ಸಚಿವ ಉಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹುಕ್ಕೇರಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಲಾಗುವುದು. ತಪ್ಪು ಸಂದೇಶ ಬಿತ್ತರಿಸುವುದು ಕೆಲ ಮಾಧ್ಯಮಗಳು ನಿಲ್ಲಿಸಬೇಕು ಎಂದಿದ್ದಾರೆ.
ಕಳೆದ ಒಂದು ವಾರದಿಂದ ನನ್ನ ಸ್ವಗ್ರಾಮ ಬೆಲ್ಲದ ಬಾಗೇವಾಡಿ ಬಿಟ್ಟು ನಾನು ಎಲ್ಲೂ ಹೋಗಿಲ್ಲ, ಹೀಗಿರುವಾಗ ಸಿಎಂ ಭೇಟಿ ಮಾಡಲು ಹೇಗೆ ಸಾಧ್ಯವೆಂದಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಪಕ್ಷದಲ್ಲೇ ಇದ್ದೇನೆ. ಮುಂದೆಯೂ ಇರುತ್ತೇನೆ ಎನ್ನುವ ಮೂಲಕ ವದಂತಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.