Select Your Language

Notifications

webdunia
webdunia
webdunia
Friday, 11 April 2025
webdunia

ಜಾರ್ಜ್ ರಾಜೀನಾಮೆ ಕೊಡುವವರೆಗೆ ಬಿಜೆಪಿ ಬಿಡೋಲ್ಲ: ಆರ್.ಅಶೋಕ್

ಕೆ.ಜೆ.ಜಾರ್ಜ್
ಬೆಂಗಳೂರು , ಶುಕ್ರವಾರ, 27 ಅಕ್ಟೋಬರ್ 2017 (15:16 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌‍ಐಆರ್ ದಾಖಲಿಸಿದ್ದರಿಂದ ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ಬಿಡೋಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಕೂಡಾ ಸಿಎಂ ಸಿದ್ದರಾಮಯ್ಯರಂತೆ ಹೇಳಿಕೆ ಕೊಡಲ್ಲ. ಸುಪ್ರೀಂಕೋರ್ಟ್ ನಿರ್ದೆಶನದ ಮೇರೆಗೆ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಸಿಬಿಐ ಸಚಿವ ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿದೆ. ಇದರಲ್ಲಿ ಕೇಂದ್ರ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿದ್ದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ, ಸಿಎಂ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರಗಳನ್ನು ಬಹಿರಂಗಗೊಳಿಸಲಾಗುವುದು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೀವರಕ್ಷಣೆಗಾಗಿ ಮೊರೆ ಇಡುತ್ತಿರುವ ಹದಿಯಾ ವಿಡಿಯೋ ಬಿಡುಗಡೆ