ಜಾರ್ಜ್ ರಾಜೀನಾಮೆ ಕೊಡುವವರೆಗೆ ಬಿಜೆಪಿ ಬಿಡೋಲ್ಲ: ಆರ್.ಅಶೋಕ್

Webdunia
ಶುಕ್ರವಾರ, 27 ಅಕ್ಟೋಬರ್ 2017 (15:16 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌‍ಐಆರ್ ದಾಖಲಿಸಿದ್ದರಿಂದ ಜಾರ್ಜ್ ರಾಜೀನಾಮೆ ನೀಡುವವರೆಗೆ ಹೋರಾಟ ಬಿಡೋಲ್ಲ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಕೂಡಾ ಸಿಎಂ ಸಿದ್ದರಾಮಯ್ಯರಂತೆ ಹೇಳಿಕೆ ಕೊಡಲ್ಲ. ಸುಪ್ರೀಂಕೋರ್ಟ್ ನಿರ್ದೆಶನದ ಮೇರೆಗೆ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಸಿಬಿಐ ಸಚಿವ ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿದೆ. ಇದರಲ್ಲಿ ಕೇಂದ್ರ ಸರಕಾರದ ಯಾವುದೇ ಪಾತ್ರವಿಲ್ಲ ಎಂದು ತಿಳಿಸಿದ್ದಾರೆ.
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿದ್ದರಿಂದ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಬಿಜೆಪಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ, ಸಿಎಂ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರಗಳನ್ನು ಬಹಿರಂಗಗೊಳಿಸಲಾಗುವುದು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಂತ: ನಿಜಕ್ಕೂ ಏನಾಯ್ತು ಈ ವಿಡಿಯೋ ನೋಡಿ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಹಿಂದುತ್ವಕ್ಕೆ ನಾವೇ ವಾರಸುದಾರರೆಂದು ಹೇಳುತ್ತಿದ್ದವರು ಈಗ ಎಲ್ಲಿ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ಮುಂದಿನ ಸುದ್ದಿ
Show comments