Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ: ಡಿಸಿಎಂ ಶಿವಕುಮಾರ್‌

BJP Karnataka, DCM DK Shivkumar, Waqf Board Controvercy

Sampriya

ಹುಬ್ಬಳ್ಳಿ , ಗುರುವಾರ, 7 ನವೆಂಬರ್ 2024 (15:17 IST)
ಹುಬ್ಬಳ್ಳಿ: ರಾಜಕೀಯ ದುರುದ್ದೇಶದಿಂದ ಬಿಜೆಪಿ ವಕ್ಫ್ ವಿವಾದ ಸೃಷ್ಟಿಸಿದೆ. ನಮ್ಮ ಸರ್ಕಾರ ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ವೇಳೆವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಬಗ್ಗೆ ಕೇಳಿದಾಗ, ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ.

ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ 2019ರಿಂದ ಮೊದಲು ನೋಟೀಸ್ ಕೊಟ್ಟಿದ್ದು ಬಿಜೆಪಿ. ಬೊಮ್ಮಾಯಿ ಅವರ ಸರ್ಕಾರವೇ ನೋಟೀಸ್ ನೀಡಿದೆ. ಈಗ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಅವರಿಗೆ ಜನ ಶಾಂತಿಯುತವಾಗಿರುವುದು ಬೇಕಾಗಿಲ್ಲ ಎಂದರು.

ಮಹಾರಾಷ್ಟ್ರ ಹಾಗೂ ರಾಜ್ಯದ ಉಪಚುನಾವಣೆ ಸಮಯದಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿರುವ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆ.  ನಾವು ದಾಖಲೆಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಿ ರೈತರನ್ನು ರಕ್ಷಣೆ ಮಾಡುತ್ತೇವೆ. ಈ ವಿಚಾರವಾಗಿ ನಮ್ಮ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಬೇಕಂತ ಈಗ್ಲೇ ಆಸ್ತಿ ಮಾಡ್ಯಾರ: ಬಸನಗೌಡ ಪಾಟೀಲ್ ಯತ್ನಾಳ್