Publish Date: Mon, 17 Oct 2016 (15:28 IST)
Updated Date: Mon, 17 Oct 2016 (15:32 IST)
ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಿಜೆಪಿಯವರೂ ರಾಜಕೀಯ ಮಾಡಬಾರದು ಎಂದು ಜಿಡಿಎಸ್ ಉಚ್ಛಾಟಿತ ಶಾಸಕ ಜಮೀರ್ ಅಹ್ಮದ್ ಹೇಳಿದರು.
ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಸಾವು ಸಾಕಷ್ಟು ನೋವು ತಂದಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಾವಿನಲ್ಲೂ ಬಿಜೆಪಿಯವರೂ ರಾಜಕೀಯ ಮಾಡಬಾರದು ಎಂದು ಕೇಳಿಕೊಂಡರು.
ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ (35) ಕೊಲೆ ಪ್ರಕರಣ ತ್ರೀವ್ರ ಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಇಂದು ಶಿವಾಜಿನಗರ ಬಂದ್‌ಗೆ ಕರೆ ನೀಡಿದ್ದು, ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ