Publish Date: Sat, 08 Apr 2023 (15:00 IST)
Updated Date: Sat, 08 Apr 2023 (15:11 IST)
ಇಂದು ಮತ್ತು ನಾಳೆ ದೆಹಲಿಯಲ್ಲಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಅದಕ್ಕೆ ಮುಂಚಿತವಾಗಿಯೇ ಗುರುವಾರ ಪೂರ್ವಭಾವಿ ಸಭೆ ನಡೆದಿದೆ. ಈ ಸಭೆಯಲ್ಲಿ ಕರ್ನಾಟಕದ ಒಟ್ಟಾರೆ ಪರಿಸ್ಥಿತಿ ಬಗ್ಗೆ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನೆ ಪ್ರಧಾನ ಕಾರ್ಯದರ್ಶಿ B.L. ಸಂತೋಷ್, ಚುನಾವಣಾ ಪ್ರಭಾರಿ ಧರ್ಮೇಂದ್ರ ಪ್ರಧಾನ್ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.