Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ಭಾನುಪ್ರಕಾಶ್ ನಿಧನ

Krishnaveni K
ಸೋಮವಾರ, 17 ಜೂನ್ 2024 (14:34 IST)
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಎಂಎಲ್ ಸಿ, ಬಿಜೆಪಿ ನಾಯಕ ಎಂ ಬಿ ಭಾನುಪ್ರಕಾಶ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರತಿಭಟನೆ ನಂತರ ಅವರು ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರನ್ನು ಕಳೇಬರವನ್ನು ಸ್ವಗ್ರಾಮಕ್ಕೆ ರವಾನಿಸಲಾಗುತ್ತಿದೆ.

ಇನ್ನು, ಎಂ.ಬಿ.ಭಾನುಪ್ರಕಾಶ್ ಅವರ ನಿಧನ ಅತ್ಯಂತ ದುಃಖಕರ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ನಮ್ಮೆಲ್ಲ ಹಿರಿಯರು, ಮಾರ್ಗದರ್ಶಕರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು, ವಿಧಾನಪರಿಷತ್ ಮಾಜಿ ಸದಸ್ಯ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾತ್ರವಲ್ಲದೆ, ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಹಾಗೂ ಕರಾವಳಿ ಕರ್ನಾಟಕದ ಲೋಕಸಭಾ ಕ್ಲಸ್ಟರ್ ಪ್ರಮುಖರಾಗಿ ಅವರು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ.

ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments