Publish Date: Sat, 23 Sep 2017 (16:43 IST)
Updated Date: Sat, 23 Sep 2017 (16:46 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯಮಟ್ಟದ ತಂಡಗಳನ್ನ ರಚಿಸಿದೆ.
ಬೂತ್ ಸಮಿತಿಗಳ ಮೇಲುಸ್ತುವಾರಿಗೆ, ಸಾಂಪ್ರದಾಯಿಕ ಪ್ರಚಾರಕ್ಕೆ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಲು ತಂಡಗಳ ರಚನೆ ಮಾಡಲಾಗಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನೇತೃತ್ವದ ಸಾಂಪ್ರದಾಯಿಕ ಪ್ರಚಾರ ತಂಡ, ಸಂಸದ ಪ್ರಹ್ಲಾದ್ ಜೋಶಿ ನೇತೃತ್ವದ ಸೋಶಿಯಲ್ ಮಿಡಿಯಾ ಪ್ರಚಾರ ತಂಡ, ಬಿ.ಪಿ.ಅರುಣಕುಮಾರ್ ನೇತೃತ್ವದ ಬೂತ್ ಸಮಿತಿಗಳ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೋರ್ ಕಮಿಟಿ ಸದಸ್ಯರ ಸಭೆಯಲ್ಲಿ ಚರ್ಚಿಸಿ ಈ ತಂಡಗಳನ್ನು ರಚಸಲಾಗಿದ್ದು, ಮುಂಬರುವ ಚುನಾವಣೆಗೆ ಈಗಿನಿಂದಲೇ ಬಿಜೆಪಿ ಸಖತ್ ತಯಾರಿ ಮಾಡಿಕೊಳ್ಳುತ್ತಿದೆ.