ಬಿಜೆಪಿ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಗುಡುಗಿದೆ.
ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ ಎಂದು ಟ್ವಿಟ್ ನಲ್ಲಿ ಹೇಳಿದೆ.ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ ಎಂದು ವಾಗ್ದಾಳಿ ನಡೆಸಿದೆ.