ಬೆಂಗಳೂರು : ಬಿಜೆಪಿಯವರು ನಮ್ಮವರನ್ನು ಮೋಸದಿಂದ ಇಲ್ಲಿಗೆ ಕರೆತಂದಿದ್ದಾರೆ ಎಂದು ಮಧ್ಯಪ್ರದೇಶದ ಶಿಕ್ಷಣ ಸಚಿವ ಜೀತೂ ಪಟ್ಟಾರಿ ಆರೋಪಿಸಿದ್ದಾರೆ.
									
										
								
																	
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್ ಸಿದ್ಧಾಂತದ ಮೇಲೆ ಅದೀಕಾರಕ್ಕೆ ಬಂದವರು ಮಧ್ಯಪ್ರದೇಶದಲ್ಲಿ ನಮ್ಮನ್ನ ಜನ ಆರಿಸಿ ಕಳಿಸಿದ್ದಾರೆ.  ನಮ್ಮವರನ್ನು ಮೋಸದಿಂದ ಇಲ್ಲಿಗೆ ಕರೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
									
			
			 
 			
 
 			
			                     
							
							
			        							
								
																	
ಬಿಜೆಪಿ ನಾಯಕರು ಜನಪರ ಸರ್ಕಾರವನ್ನು ಉರುಳಿಸುವ ಪ್ರಯತ್ನ ನಡೆಸಿದ್ದಾರೆ. ಇವರು ಪ್ರಜಾಪ್ರಭುತ್ವವನ್ನೇ ಹಾಳು ಮಾಡುತ್ತಿದ್ದಾರೆ. ನಮ್ಮ ಶಾಸಕರನ್ನು ಕರೆತಂದು ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಅವರನ್ನು ಭೇಟಿ ಮಾಡಲು ಬಿಡುತ್ತಿಲ್ಲ. ಬಿಜೆಪಿಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಿದೆ ಎಂದು ಅವರು ಕಿಡಿಕಾರಿದ್ದಾರೆ.