Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಕಾಮಾಲೆ ರೋಗ ಬಂದಿದೆ : ಸಿದ್ದರಾಮಯ್ಯ

ಬಿಜೆಪಿಗೆ ಕಾಮಾಲೆ ರೋಗ ಬಂದಿದೆ : ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 16 ಆಗಸ್ಟ್ 2022 (12:38 IST)
ಬೆಂಗಳೂರು : ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎನ್ನುವ ಈ ಬಿಜೆಪಿಯವರಿಗೆ ಕಾಮಲೇ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.
 
ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರದಲ್ಲಿ ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕಾಮಾಲೆ ರೋಗ ಬಂದಿದೆ.

ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದರೆ ಟಿಪ್ಪು ಫೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗಲ್ವಾ? ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಾನೆ ಇರುತ್ತಾರೆ.

ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕುತ್ತಾರೆ. ಮಗೂನು ಚಿವುಟುತ್ತಾರೆ ತೊಟ್ಟಿಲು ಕೂಡ ತೂಗುತ್ತಾರೆ ಎಂದು ಕಿಡಿಕಾರಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಆರ್‌ಎಸ್‌ಎಸ್‌ಗೆ ಶರಣಾದ್ರ ಸಿಎಂ ಬೊಮ್ಮಾಯಿ?