Publish Date: Sat, 06 May 2023 (18:00 IST)
Updated Date: Sat, 06 May 2023 (17:46 IST)
ಬಿಜೆಪಿ ತನ್ನ ದ್ವೇಷದ ಮೂಲಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರನ್ನು ಕೊಲ್ಲುವ ಸಂಚು ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಸುರ್ಜೇವಾಲ ಆಡಿಯೋ ರಿಲೀಸ್ ಮಾಡಿದ್ರು.. ಚುನಾವಣೆ ಸೋಲುವ ಹತಾಶೆಯಲ್ಲಿ ಬಿಜೆಪಿ ಹಾಗೂ ಅದರ ನಾಯಕರು ಅತ್ಯಂತ ಭಯಾನಕ ಹಂತಕ್ಕೆ ತಲುಪಿದ್ದಾರೆ. ಪ್ರತಿನಿತ್ಯ ಭಾವನಾತ್ಮಕ ವಿಚಾರದ ಬಗ್ಗೆ ಮಾತನಾಡಿ ಸಮಾಜ ಒಡೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ರು.. ಕುತಂತ್ರದಲ್ಲೂ ಯಶಸ್ಸು ಕಾಣದೆ ಕುಸಿಯುತ್ತಿರುವ ಬಿಜೆಪಿ ಈಗ ತಮ್ಮ ಬತ್ತಳಿಕೆಯಿಂದ ಹತ್ಯೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಕೇವಲ ಖರ್ಗೆ ಅವರ ಮೇಲೆ ದಾಳಿಯ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು ರೂಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.. ಇಷ್ಟೆಲ್ಲಾ ಆದರೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.