‘ಖರ್ಗೆ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ’

Webdunia
ಶನಿವಾರ, 6 ಮೇ 2023 (18:00 IST)
ಬಿಜೆಪಿ ತನ್ನ ದ್ವೇಷದ ಮೂಲಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರನ್ನು ಕೊಲ್ಲುವ ಸಂಚು ರೂಪಿಸಿದೆ ಎಂದು ಕಾಂಗ್ರೆಸ್​ ರಾಜ್ಯ ಉಸ್ತುವಾರಿ ರಣದೀಪ್​​ ಸಿಂಗ್​​ ಸುರ್ಜೇವಾಲ ಆರೋಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ ಎಂದು ಸುರ್ಜೇವಾಲ ಆಡಿಯೋ ರಿಲೀಸ್​ ಮಾಡಿದ್ರು.. ಚುನಾವಣೆ ಸೋಲುವ ಹತಾಶೆಯಲ್ಲಿ ಬಿಜೆಪಿ ಹಾಗೂ ಅದರ ನಾಯಕರು ಅತ್ಯಂತ ಭಯಾನಕ ಹಂತಕ್ಕೆ ತಲುಪಿದ್ದಾರೆ. ಪ್ರತಿನಿತ್ಯ ಭಾವನಾತ್ಮಕ ವಿಚಾರದ ಬಗ್ಗೆ ಮಾತನಾಡಿ ಸಮಾಜ ಒಡೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕಿಡಿಕಾರಿದ್ರು.. ಕುತಂತ್ರದಲ್ಲೂ ಯಶಸ್ಸು ಕಾಣದೆ ಕುಸಿಯುತ್ತಿರುವ ಬಿಜೆಪಿ ಈಗ ತಮ್ಮ ಬತ್ತಳಿಕೆಯಿಂದ ಹತ್ಯೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ. ಕೇವಲ ಖರ್ಗೆ ಅವರ ಮೇಲೆ ದಾಳಿಯ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು ರೂಪಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ರು.. ಇಷ್ಟೆಲ್ಲಾ ಆದರೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments