Webdunia - Bharat's app for daily news and videos

Install App

ಬಿಜೆಪಿಯವರು ಹಿಂದೂ ಸಮಾಜವನ್ನು ಗುತ್ತಿಗೆ ಪಡೆದಿಲ್ಲ: ಕಾಂಗ್ರೆಸ್ ತಿರುಗೇಟು

Sampriya
ಸೋಮವಾರ, 1 ಜುಲೈ 2024 (21:31 IST)
ಬೆಂಗಳೂರು: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದ ಹಾಗೇ 'ಬಿಜೆಪಿಯವರು ಹಿಂದೂ ಸಮಾಜವನ್ನು ಗುತ್ತಿಗೆ ಪಡೆದಿಲ್ಲ' ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ಲೋಕಸಭೆಯಲ್ಲಿಅಬ್ಬರದ ಭಾಷಣ ಮಾಡಿದ ರಾಹುಲ್ ಗಾಂಧಿ ಅವರು ಆಡಳಿತರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಹಿಂದುತ್ವ ಎಂದರೆ ಭಯ, ದ್ವೇಷ ಹಾಗೂ ಸುಳ್ಳುಗಳನ್ನು ಹರಡುವುದು ಅಲ್ಲ. ಇಂದು ಹಿಂದುತ್ವ ಎಂದು ಹೇಳಿಕೊಂಡು ತಿರುಗಾಡುತ್ತಿರುವವರೇ ಹಿಂಸಾಚಾರವನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದರು.

ರಾಹುಲ್ ಅವರ ಈ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಬಿಜೆಪಿ ಮುಖಂಡರು ಹಿಂದೂ ಸಮಾಜವನ್ನು ಅವಮಾನಿಸಿದ ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತಿದ್ದಾರೆ.  ಸದ್ಯ ಬಿಜೆಪಿ ಮುಖಂಡರು ರಾಹುಲ್ ಗಾಂಧಿ ಅವರ ನಡೆಯ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಇದರ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ, ನರೇಂದ್ರ ಮೋದಿ ಇಡೀ ಹಿಂದೂ ಸಮಾಜವಲ್ಲ, ಬಿಜೆಪಿ ಎಂದರೆ ಇಡೀ ಹಿಂದೂ ಸಮಾಜವಲ್ಲ, ಆರ್‌ಎಸ್‌ಎಸ್ ಇಡೀ ಹಿಂದೂ ಸಮಾಜವಲ್ಲ, ಬಿಜೆಪಿಗೆ ಹಿಂದೂ ಸಮಾಜದ ಗುತ್ತಿಗೆ ಇಲ್ಲ ಎಂದು ತಿರುಗೇಟು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments