Select Your Language

Notifications

webdunia
webdunia
webdunia
webdunia

ಮೇ 10 ನೇ ತಾರೀಖು ಉತ್ತರ ಸಿಗುತ್ತೆ : ಭಾಸ್ಕರ್ ರಾವ್

ಮೇ 10 ನೇ ತಾರೀಖು ಉತ್ತರ ಸಿಗುತ್ತೆ : ಭಾಸ್ಕರ್ ರಾವ್
bangalore , ಬುಧವಾರ, 12 ಏಪ್ರಿಲ್ 2023 (19:59 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ತಮಗೆ ಟಿಕೆಟ್ ನೀಡಿದಕ್ಕೆ ಚಾಮರಾಜಪೇಟೆ ಬಿಜೆಪಿ ಅಭ್ಯರ್ಥಿ ಭಾಸ್ಕರ್ ರಾವ್ ಬಿಜೆಪಿ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ..ಬಿಜೆಪಿ ಟಿಕೆಟ್ ಘೋಷಿಸಿದ್ದಕ್ಕೆ ಪಕ್ಷದ ವರಿಷ್ಠರಿಗೆ ನಾನು ಚಿರಋಣಿ. ಬಿಜೆಪಿಯಲ್ಲಿ ಸಿದ್ಧಾಂತ, ರಾಷ್ಟ್ರೀಯತೆ ಇರುವುದರಿಂದ ಸೇರಿದ್ದೇನೆ. ಕಳೆದ 30 ವರ್ಷದಿಂದ ಚಾಮರಾಜಪೇಟೆಯಲ್ಲಿ ಬಿಜೆಪಿ ಗೆದ್ದಿಲ್ಲ. ಚಾಮರಾಜಪೇಟೆಗೆ ನಾನು ಹೊಸಬನಲ್ಲ, ನಾನು ಇಲ್ಲಿನ ನಿವಾಸಿ ಎಂದು ತಿಳಿಸಿದರು.ಬಿಜೆಪಿ 189 ಟಿಕೆಟ್‌ ಘೋಷಣೆ ಮಾಡಿದೆ. ನನಗೂ ಸುವರ್ಣ ಅವಕಾಶ ಸಿಕ್ಕಿದೆ. ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ನಾನು ಚಿರಋಣಿ. ಬಿಜೆಪಿ ಪಕ್ಷದಲ್ಲಿ ಸಿದ್ದಾಂತ, ರಾಷ್ಟ್ರೀಯತೆ ಇರೋದ್ರಿಂದ ಪಕ್ಷಕ್ಕೆ ಸೇರಿದ್ದೇನೆ. 30 ವರ್ಷದಿಂದ ಚಾಮರಾಜಪೇಟೆ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿಲ್ಲ ಮೇ 10 ನೇ ತಾರೀಖು ಉತ್ತರ ಸಿಗುತ್ತೆ...ಇನ್ನು ಇದೇ ವೇಳೆ ಚಾಮರಾಜಪೇಟೆಯಲ್ಲಿ ಟಿಕೆಟ್ ಆಕಾಂಕ್ಷಿ ಸುನೀಲ್ ವೆಂಕಟೇಶ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಭಾಸ್ಕರ್ ರಾವ್, ಯಾವುದೇ ಅಸಮಾಧಾನವಿಲ್ಲ. ಹಾಗೇನಾದ್ರೂ ಇದ್ರೆ ಆ ನಾಯಕರನ್ನ ಭೇಟಿ ಮಾಡ್ತೀನಿ. ನಾಯಕರ ಮನವೊಲಿಸುವ ಪ್ರಯತ್ನ ಮಾಡ್ತೀನಿ. ಎಲ್ಲಾ ನಾಯಕರ ಬೆಂಬಲವಿದೆ. ಒಟ್ಟಾಗಿ ಗೆಲ್ಲುವ ವಿಶ್ವಾಸವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ