Select Your Language

Notifications

webdunia
webdunia
webdunia
webdunia

ಬಿಜೆಪಿ ಹಿಟ್ಲರ್‌ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ನಡೆಸಿದೆ: ಮುಖ್ಯಮಂತ್ರಿ ಚಂದ್ರು

Mukhya Manthri Chandru

Sampriya

ಕಾರಾವಾರ , ಭಾನುವಾರ, 17 ಮಾರ್ಚ್ 2024 (15:16 IST)
Photo Courtesy X
ಕಾರವಾರ: ಕೋಮುವಾದಕ್ಕೆ ಆದ್ಯತೆ ನೀಡುತ್ತಿರುವ ಬಿಜೆಪಿ ಸರ್ವಾಧಿಕಾರಿಯಾಗಿದೆ. ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
 
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ.  ಹಿಟ್ಲರ್ ಗಿಂತ ಕೆಟ್ಟ ಸರ್ವಾಧಿಕಾರಿ ಆಡಳಿತ ಮಾಡಿದೆ ಎಂದರು.
 
ರೈತರ ಸಾಲಮನ್ನಾ ಮಾಡದೆ, ಬಡ್ಡಿ ರಿಯಾಯಿತಿಯೂ ಕೊಡದ ಸರ್ಕಾರ ಉದ್ಯಮಿಗಳ ಹತ್ತಾರು ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದು ನಾಚಿಕೆಗೇಡು. ಬಿಜೆಪಿ ನಾಯಕರು ವಿಶ್ವಗುರುವಾಗುವ ಮುನ್ನ ವಿಶ್ವ ಮಾನವರಾಗಬೇಕಿದೆ ಎಂದರು.
 
ರಾಜ್ಯದಿಂದ ಎರಡು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ಕೇಳಲಾಗಿತ್ತು. ಅವಕಾಶ ಸಿಕ್ಕಿಲ್ಲ. ಸ್ಪರ್ಧೆಯಲ್ಲಿ ಇಲ್ಲದಿದ್ದರೂ ಬಿಜೆಪಿ ವಿರುದ್ಧ ಪ್ರಚಾರ ಮಾಡಲಾಗುತ್ತದೆ ಎಂದರು.
 

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಈಶ್ವರಪ್ಪ ಮನವೊಲಿಕೆಗೆ ಕಮಲ ನಾಯಕರ ಸರ್ಕಸ್