Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು : ಸಿಎಂ ಆರೋಪ

ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಸಂಚು : ಸಿಎಂ ಆರೋಪ
ಬೆಳಗಾವಿ , ಶುಕ್ರವಾರ, 15 ಸೆಪ್ಟಂಬರ್ 2017 (17:03 IST)
ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಟೀಕಿಸಲು ಯಾವುದೇ ಚುನಾವಣೆ ವಿಷಯಗಳಿಲ್ಲವಾದ್ದರಿಂದ, ಕೋಮುಗಲಭೆಯನ್ನು ಸೃಷ್ಟಿಸಿ ಜಯಗಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮುಂಬರುವ ಚುನಾವಣೆಯಲ್ಲಿ ಜಯ ದೊರೆಯುವುದಿಲ್ಲ ಎನ್ನುವುದು ಖಾತರಿಯಾಗಿದೆ ಎಂದು ತಿಳಿಸಿದ್ದಾರೆ. 
 
ಭ್ರಮನಿರಸನಗೊಂಡಿರುವ ಬಿಜೆಪಿ ನಾಯಕರು ಸಮುದಾಯಗಳಲ್ಲಿ ಒಡಕು ಮೂಡಿಸಿ ಹಿಂಸಾಚಾರವೆಬ್ಬಿಸುವ ಹುನ್ನಾರ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ. ಆದರೆ, ಸರಕಾರ ವಿಚ್ಚಿದ್ರಕಾರಿ ಶಕ್ತಿಗಳನ್ನು ಸದೆಬಡೆಯುವ ಸಾಮರ್ಥ ಹೊಂದಿದೆ ಎಂದು ಗುಡುಗಿದ್ದಾರೆ.
 
ಒಂದು ಕಡೆ, ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕತೆಯಿಂದ ಕಾರ್ಯನಿರ್ವಹಿಸುತ್ತಿದ್ದರೆ, ಮತ್ತೊಂದೆಡೆ ಪ್ರಧಾನಿ ಮೋದಿ ಜನತೆಗೆ ನೀಡಿದ ಅಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ತಿರುಗೇಟು ನೀಡಿದರು.
 
ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಬಿಜೆಪಿ ಗಂಟುಮೂಟೆ ಕಟ್ಟಿಕೊಂಡು ಹೊರಹೋಗುವುದು ಖಾತರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಂದು ಭವಿಷ್ಯ ನುಡಿದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯನ ಹತ್ಯೆ