ಬಿಜೆಪಿ ಲಿಂಗಾಯತರನ್ನೇ ಟಾರ್ಗೆಟ್ ಮಾಡಿದೆ : ಎಂ ಬಿ ಪಾಟೀಲ್

Webdunia
ಸೋಮವಾರ, 17 ಏಪ್ರಿಲ್ 2023 (17:50 IST)
ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ.ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಸತ್ಯ ಅನ್ನಿಸುತ್ತದೆ. ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ಬಿಜೆಪಿ ತಯಾರಿ ನಡೆಸುತ್ತಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಯಾಕೆ ಸಿಎಂ ಸ್ಥಾನದಿಂದ ಕೆಳಗಿಳಿಸಿದರು. ಯಾಕೆ ಅವರನ್ನು ಸೈಡ್‌ ಲೈನ್ ಮಾಡಿದ್ದಾರೆ. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ ಬಸವರಾಜ ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ. ಬಿಜೆಪಿ ಲಿಂಗಾಯತ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ. ಈಗ ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡಿಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೊಡುತ್ತಿಲ್ಲ. ಯಡಿಯೂರಪ್ಪ ಅವರನ್ನು ಇಳಿಸಿ ಬೇರೆಯವರನ್ನು ಸಿಎಂ ಮಾಡಲು ಹೊರಟಿದ್ದರು. ಆದರೆ ಬ್ಯಾಕ್ ಫೈರ್ ಆಗುತ್ತದೆ ಎಂಬ ಕಾರಣಕ್ಕೆ ಬೊಮ್ಮಾಯಿ ಅವರನ್ನು ಸಿಎಂ ಮಾಡಿದರು. ಈ ಹಿಂದೆ ಕುಮಾರಸ್ವಾಮಿ ಒಂದು ಹೇಳಿಕೆ ಕೊಟ್ಟಿದ್ದರು. ಇದನ್ನು ನೋಡ್ತಿದ್ರೆ ಅದು ನಿಜ ಅನ್ನಿಸುತ್ತದೆ. ಆ ಹೇಳಿಕೆ ಏನು ಅನ್ನೋದನ್ನು ಕುಮಾರಸ್ವಾಮಿ ಅವರನ್ನೇ ಕೇಳಿ ಎಂದು ಬಿಜೆಪಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments