Select Your Language

Notifications

webdunia
webdunia
webdunia
webdunia

ಬಿಜೆಪಿಯವರು ನನ್ನ ಹೇಳಿಕೆ ತಿರುಚಿದ್ದಾರೆ- ಗೃಹ ಸಚಿವ ಜಿ. ಪರಮೇಶ್ವರ್

ಬಿಜೆಪಿಯವರು ನನ್ನ ಹೇಳಿಕೆ ತಿರುಚಿದ್ದಾರೆ- ಗೃಹ ಸಚಿವ ಜಿ. ಪರಮೇಶ್ವರ್
bangalore , ಬುಧವಾರ, 4 ಅಕ್ಟೋಬರ್ 2023 (20:01 IST)
ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಘಟನೆಗೆ ಕಾರಣ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ತನಿಖೆ ಮುಗಿದ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಅಲ್ಲದೆ, ಶಿವಮೊಗ್ಗ ಘಟನೆಯನ್ನು ಸಣ್ಣದು ಎಂದಿಲ್ಲ. ನನ್ನ ಹೇಳಿಕೆ ತಿರುಚಲಾಗಿದೆ. ಗಲಭೆ ಹಿನ್ನೆಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ವಿಭಾಗದ ಎಡಿಜಿಪಿಯನ್ನೇ ನಾವು ಶಿವಮೊಗ್ಗಕ್ಕೆ ಕಳಿಸಿದ್ದೆವು. ಎರಡೂ ಕಡೆಯಿಂದಲೂ ಕಲ್ಲು ಹೊಡೆದಿದ್ದಾರೆ. ಕೆಲವರ ಬಂಧನ ಆಗಿದೆ, ತನಿಖೆ ನಡೆಯುತ್ತಿದೆ ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಯಿಂದ ಸಿಟಿ ರೌಂಡ್ಸ್