Publish Date: Sat, 03 Mar 2018 (10:14 IST)
Updated Date: Sat, 03 Mar 2018 (10:16 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿರ್ಧಾರವನ್ನು ಧಿಕ್ಕರಿಸಿ ತಾನೇ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿದೆ.
ಪರಿವರ್ತನಾ ರ್ಯಾಲಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಅಭ್ಯರ್ಥಿಗಳನ್ನು ಘೋಷಿಸಿದ್ದರು. ಆದರೆ ಈ ಅಭ್ಯರ್ಥಿಗಳ ಪಟ್ಟಿ ಕಡೆಗಣಿಸಿದ ಹೈಕಮಾಂಡ್ ಉಳಿದ ಆಕಾಂಕ್ಷಿಗಳಿಗೂ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಸೂಚಿಸಿದೆ.
ಇದು ಬಿಎಸ್ ವೈ ಬೆಂಬಲಿಗರ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯಾಧ್ಯಕ್ಷರಿಗೆ ಕವಡೆ ಕಾಸಿನ ಕಿಮ್ಮತ್ತಿನ ಬೆಲೆ ಕೊಡದೇ ಸ್ವತಃ ಹೈಕಮಾಂಡ್ ತಾನೇ ಖುದ್ದಾಗಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿರುವುದು ಬಿಎಸ್ ವೈ ಬೆಂಬಲಿಗರಿಗೆ ಬೇಸರ ಮೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ