Publish Date: Sun, 15 Apr 2018 (08:33 IST)
Updated Date: Sun, 15 Apr 2018 (08:36 IST)
ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.
ಯೋಗಿ ಆದಿತ್ಯನಾಥ್ ಅಲ್ಲ, ಡೋಂಗಿ ಆದಿತ್ಯನಾಥ್ ಎಂದು ದಿನೇಶ್ ಗುಂಡೂರಾವ್ ಅಪಹಾಸ್ಯ ಮಾಡಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉತ್ತರ ಪ್ರದೇಶ ಸಿಎಂ ಬಗ್ಗೆ ಹಾಸ್ಯಾಸ್ಪದವಾಗಿ, ಅವಹೇಳನಕಾರಿ ಹೇಳಿಕೆ ನೀಡಿರುವ ದಿನೇಶ್ ಗುಂಡೂರಾವ್ ಬಂಧನವಾಗಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.