Select Your Language

Notifications

webdunia
webdunia
webdunia
webdunia

ಅಮಿತ್ ಶಾ ನಾಲಾಯಕ್ ಹೋಂ ಮಿನಿಸ್ಟರ್ ಎಂದ ಪ್ರಿಯಾಂಕಾ ಖರ್ಗೆ ವಿರುದ್ಧ ಬಿಜೆಪಿ ಗರಂ

Priyank Kharge

Sampriya

ಬೆಳಗಾವಿ , ಶುಕ್ರವಾರ, 19 ಡಿಸೆಂಬರ್ 2025 (20:25 IST)
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ಗಲಾಟೆ, ಗದ್ದಲಕ್ಕೆ ಕಾರಣವಾಯಿತು.

ಇನ್ನೂ ಈ ವಿಚಾರವಾಗಿ ಖರ್ಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಚರ್ಚೆ ವೇಳೆಯಲ್ಲಿ ಅಮಿತ್ ಶಾ ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆ ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಯಿತು. 

ಅಮಿತ್​ ಶಾ ಅವರ ಹೆಸರನ್ನ ಪ್ರಸ್ತಾಪಿಸಿದ್ದಕ್ಕೆ ಪ್ರಿಯಾಂಕ್​ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಿ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

ಇನ್ನೂ ಕಡತದಿಂದ ಈ ಹೇಳಿಕೆಯನ್ನು ತೆಗೆದುಹಾಕುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದಾಗ,  ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಟನೆ ನಡೆಸಿ, ಪ್ರಿಯಾಂಕಾ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. 

ಈ ವೇಳೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜೋರಾದ ಗಲಾಟೆ ನಡೆಯಿತು.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿಷಕಾರಿ ಕೆಮ್ಮಿನ ಸಿರಪ್ ಹಂಚಿದೆ: ಮುಖೇಶ್ ವರ್ಮಾ