ಅಮಿತ್ ಶಾ ನಾಲಾಯಕ್ ಹೋಂ ಮಿನಿಸ್ಟರ್ ಎಂದ ಪ್ರಿಯಾಂಕಾ ಖರ್ಗೆ ವಿರುದ್ಧ ಬಿಜೆಪಿ ಗರಂ

Sampriya
ಶುಕ್ರವಾರ, 19 ಡಿಸೆಂಬರ್ 2025 (20:25 IST)
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ಗಲಾಟೆ, ಗದ್ದಲಕ್ಕೆ ಕಾರಣವಾಯಿತು.

ಇನ್ನೂ ಈ ವಿಚಾರವಾಗಿ ಖರ್ಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಚರ್ಚೆ ವೇಳೆಯಲ್ಲಿ ಅಮಿತ್ ಶಾ ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆ ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಯಿತು. 

ಅಮಿತ್​ ಶಾ ಅವರ ಹೆಸರನ್ನ ಪ್ರಸ್ತಾಪಿಸಿದ್ದಕ್ಕೆ ಪ್ರಿಯಾಂಕ್​ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಿ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.

ಇನ್ನೂ ಕಡತದಿಂದ ಈ ಹೇಳಿಕೆಯನ್ನು ತೆಗೆದುಹಾಕುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದಾಗ,  ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಟನೆ ನಡೆಸಿ, ಪ್ರಿಯಾಂಕಾ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. 

ಈ ವೇಳೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜೋರಾದ ಗಲಾಟೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೌಡಿ ಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣ, ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ಟೆನ್ಷನ್‌

ಮಲೆನಾಡಿನ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಳ, ಇದು ಹೇಗೆ ಹರಡುತ್ತದೆ ಗೊತ್ತಾ

ಜರ್ಮನಿಯ ಪರಿಸರ ಸಚಿವರನ್ನು ಭೇಟಿಯಾರ ರಾಹುಲ್ ಗಾಂಧಿ, ಚರ್ಚಿಸಿದ ವಿಷಯ ಹೀಗಿದೆ

ಮೆಸ್ಸಿ ಪ್ರವಾಸ: ಅಧಿಕಾರಿಯೊಬ್ಬರ ವಿರುದ್ಧ ₹50ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಗಂಗೂಲಿ

ಸಿಎಂ ಕುರ್ಚಿ ಬಗ್ಗೆ ಪ್ರತಿಪಕ್ಷಗಳಿಗೆ ಉತ್ತರ ಕೊಡುವ ನೆಪದಲ್ಲಿ ಡಿಕೆಶಿಗೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ರಾ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments