ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು 'ನಾಲಾಯಕ್ ಹೋಮ್ ಮಿನಿಸ್ಟರ್' ಎಂದು ಸಚಿವ ಪ್ರಿಯಾಂಕಾ ಗಾಂಧಿ ಶುಕ್ರವಾರ ಮೇಲ್ಮನೆಯಲ್ಲಿ ನೀಡಿದ ಹೇಳಿಕೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ, ಗಲಾಟೆ, ಗದ್ದಲಕ್ಕೆ ಕಾರಣವಾಯಿತು.
ಇನ್ನೂ ಈ ವಿಚಾರವಾಗಿ ಖರ್ಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಚರ್ಚೆ ವೇಳೆಯಲ್ಲಿ ಅಮಿತ್ ಶಾ ನಾಲಾಯಕ್ ಹೋಮ್ ಮಿನಿಸ್ಟರ್' ಎಂದ ಪ್ರಿಯಾಂಕ್ ಖರ್ಗೆ ಹೇಳಿಕೆ ಬಿಜೆಪಿಯವರ ಆಕ್ರೋಶಕ್ಕೆ ಕಾರಣವಾಯಿತು.
ಅಮಿತ್ ಶಾ ಅವರ ಹೆಸರನ್ನ ಪ್ರಸ್ತಾಪಿಸಿದ್ದಕ್ಕೆ ಪ್ರಿಯಾಂಕ್ ಖರ್ಗೆ ನಾಲಿಗೆ ಬಿಗಿ ಹಿಡಿದು ಮಾತನಾಡಿ ಎಂದು ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದರು.
ಇನ್ನೂ ಕಡತದಿಂದ ಈ ಹೇಳಿಕೆಯನ್ನು ತೆಗೆದುಹಾಕುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದಾಗ, ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಟನೆ ನಡೆಸಿ, ಪ್ರಿಯಾಂಕಾ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಈ ವೇಳೆ ಆಡಳಿತಾರೂಢ ಪಕ್ಷದ ಸದಸ್ಯರು ಪ್ರಿಯಾಂಕ್ ಖರ್ಗೆ ಬೆಂಬಲಕ್ಕೆ ನಿಂತರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜೋರಾದ ಗಲಾಟೆ ನಡೆಯಿತು.