Select Your Language

Notifications

webdunia
webdunia
webdunia
webdunia

ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ

bJP
ಸದನದಲ್ಲಿ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲ ಇದೆ, ಕಬ್ಬಿನ ಬೆಳೆಗಾರರ ಕೂಗಿಗೆ ಈ ರಾಜ್ಯ ಸರ್ಕಾರ ಕಿವಿ ಕೊಡ್ತಿಲ್ಲ.ಅದೇ ರೀತಿ ಉತ್ತರ ಕರ್ನಾಟಕದ‌ ಅಭಿವೃದ್ಧಿ ಬಗ್ಗೆ ಮರೆತಿದೆ. ಶಾಸಕರಿಗೆ ಬಿಡುಗಡೆ ಆಗ್ಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ. ಇಲ್ಲಿ ತನಕ ಶಾಸಕರಿಗೆ ಒಂದು ರೂಪಾಯಿ ಅನುದಾನವನ್ನು ಈ ಸರ್ಕಾರ ಬಿಡುಗಡೆ ಮಾಡಿಲ್ಲ,

ಈ ಸರ್ಕಾರ ರೈತ ವಿರೋಧಿ, ಬಡವಿರೋಧಿ ಸರ್ಕಾರ.. ಇನ್ನು ಕಾಂತರಾಜ್ ವರದಿಯಲ್ಲಿ ಈ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದು ಕಾಣ್ತಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಸರ್ಕಾರವನ್ನು ಅಧಿವೇಶನದಲ್ಲಿ ಕಟ್ಟಿಹಾಕುತ್ತೇವೆ. ಅಧಿವೇಶನದಲ್ಲಿ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ. ಜಾತಿಗಣತಿ ಸೇರಿ ಸಾಕಷ್ಟು ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಚರ್ಚಿಸುತ್ತೇವೆ ಎಂದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಜಮೀರ್​ ಅಹ್ಮದ್​ ಖಾನ್​​ ಒಬ್ಬ ಹುಚ್ಚ - MPR