ಬಿಜೆಪಿಯವರಿಗೆ ಗಾಬರಿ ಆಗಿದೆ - ಡಿಕೆಶಿ

Webdunia
ಗುರುವಾರ, 4 ಮೇ 2023 (16:50 IST)
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಬಗ್ಗೆ ಉಲ್ಲೇಖ ಹಿನ್ನೆಲೆ ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಯವರಿಗೆ ಗಾಬರಿ ಆಗಿದೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್​​​​​ ವ್ಯಂಗ್ಯವಾಡಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸ ಇಲ್ವಾ?.. ಬಜರಂಗದಳ ಒಂದು ರಾಜಕೀಯ ಪಕ್ಷದ ವಿಭಾಗ. ಹನುಮಂತನ ಹೆಸರು ಇಟ್ಟುಕೊಂಡವರೆಲ್ಲಾ ಆಂಜನೇಯ ಆಗಲ್ಲ. ಬಜರಂಗದಳದವರು ನೈತಿಕ ಪೊಲೀಸ್​​ಗಿರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ರು.. ದೇವರ ಹೆಸರನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಬಿಜೆಪಿಯವರು ಒಂದಾದ್ರೂ ಆಂಜನೇಯ ದೇಗುಲ ಕಟ್ಟಿದ್ದಾರಾ ಎಂದು ಪ್ರಶ್ನಿಸಿದ್ರು.. ರಾಜ್ಯದಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಅಧಿಕಾರಕ್ಕೆ ಬಂದರೆ ಆಂಜನೇಯ ದೇಗುಲ ಅಭಿವೃದ್ಧಿಗೆ ಒತ್ತು ನೀಡ್ತೀವಿ. ಆಂಜನೇಯ ದೇಗುಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತೇವೆ. ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ವಿಶೇಷ ಮಂಡಳಿ ಮಾಡುತ್ತೇವೆ. ಯುವಕರಲ್ಲಿ ಆಂಜನೇಯ ಸಿದ್ಧಾಂತ ಬೆಳೆಸಲು ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಾಲೂಕಿನಲ್ಲೂ ಆಂಜನೇಯನ ಹೆಸರಿನಲ್ಲಿ ಪ್ರತ್ಯೇಕ ಕಾರ್ಯಕ್ರಮ ನಡೆಸುತ್ತೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments