ಬಿಜೆಪಿ ಉಸಿರುಗಟ್ಟಿಸುವ ಮನೆ ಹಾಳು ಮಾಡುವ ಪಕ್ಷವಾಗಿದೆ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕುಮಾರ ಬಂಗಾರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರ್ ಬಂಗಾರಪ್ಪ ಹಿಂದೆ ಕೂಡಾ ಬಿಜೆಪಿಗೆ ಸೇರ್ಪಡೆಗೊಂಡು ಕೆಲವೇ ದಿನಗಳಲ್ಲಿ ಅದೊಂದು ಉಸಿರುಗಟ್ಟಿಸುವ ಪಕ್ಷವಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವುದನ್ನು ಮರೆಯಲು ಸಾಧ್ಯವೇ? ಎಂದು ತಿರುಗೇಟು ನೀಡಿದರು.
ಇದೀಗ ಮತ್ತೆ ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರಿಂದ ಅವರ ಆರೋಗ್ಯದ ಬಗ್ಗೆ ಚಿಂತೆಯಾಗಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಬಿಜೆಪಿ ಮುಖಂಡರ ಹೇಳಿಕೆಯ ಮಧ್ಯೆ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಅವರ ಬಿಜೆಪಿ ಸೇರ್ಪಡೆ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.