Publish Date: Sun, 29 Jan 2023 (12:27 IST)
Updated Date: Sun, 29 Jan 2023 (15:29 IST)
ಬೆಂಗಳೂರು : ಬಿಜೆಪಿ 150 ಸ್ಥಾನ ಪಡೆದು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಅಂತಾ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿಜಯ ಸಂಕಲ್ಪ ಯಾತ್ರೆ ಅತ್ಯುತ್ತಮವಾಗಿ ನಡೆಯುತ್ತಿದೆ. ಪ್ರತಿ ಬೂತ್ನಲ್ಲಿ ಬಿಜೆಪಿ ಬಾವುಟ ಕಟ್ಟುವ ಕೆಲಸ ಆಗುತ್ತಿದೆ.
ಕೇಂದ್ರ ರಾಜ್ಯ ಸರ್ಕಾರದ ಯೋಜನೆಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡಲಾಗ್ತಿದೆ. ವಿಜಯ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ತಿಳಿಸಿದ್ದಾರೆ.