Select Your Language

Notifications

webdunia
webdunia
webdunia
webdunia

ಬಿಜೆಪಿ ಅತ್ಯಂತ ದುರ್ಬಲ ಪಕ್ಷ, ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ: ಸಿಎಂ

ಬಿಜೆಪಿ ಅತ್ಯಂತ ದುರ್ಬಲ ಪಕ್ಷ, ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ: ಸಿಎಂ
ದಾವಣಗೆರೆ(ಚನ್ನಗಿರಿ) , ಶನಿವಾರ, 18 ನವೆಂಬರ್ 2017 (14:05 IST)
ಬಿಜೆಪಿ ಅತ್ಯಂತ ದುರ್ಬಲ ಪಕ್ಷವಾಗಿದ್ದು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ಪಕ್ಷ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 224 ಕ್ಷೇತ್ರಗಳು ಮಾತ್ರವಲ್ಲ 480 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ತಾಕತ್ತಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿ ನಡೆಸುತ್ತಿರುವ ಪರಿವರ್ತನಾ ಯಾತ್ರೆ ಅಟ್ಟರ್ ಫ್ಲಾಪ್‌. ಯಾತ್ರೆಗೆ ಜನರೇ ಸೇರುತ್ತಿಲ್ಲ. ಬಿಜೆಪಿ ಬಗ್ಗೆ ಜನರಿಗೆ ನಿರಾಶಾಭಾವನೆ ಉಂಟಾಗಿದೆ ಎಂದರು.
 
ಮುಂಬರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಫೆಬ್ರವರಿಯಲ್ಲಿ ಬಜೆಟ್ ಮಂಡಿಸುತ್ತೇನೆ. ಮತ್ತೆ ನಾವೇ ಅಧಿಕಾರಕ್ಕೆ ಬರೋದು ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
 
ಮುಂಬರುವ ಜನೆವರಿ ತಿಂಗಳಲ್ಲಿ ವಿಧಾನಸಭೆ ಚುನಾವೆಣೆಗಾಗಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. ವೈದ್ಯರ ಮುಷ್ಕರದಿಂದ ಸಾವುಗಳಉ ಸಂಭವಿಸಿವೆ ಎನ್ನುವುದೆಲ್ಲಾ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಗುಪ್ತಾಂಗ ಕತ್ತರಿಸಿದ ಕ್ರೂರ ಕಾಮುಕ