Publish Date: Wed, 02 Sep 2026 (15:30 IST)
Updated Date: Wed, 02 Sep 2026 (15:32 IST)
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿ ಸಂವಿಧಾನ ವಿರೋಧಿ ಸರ್ಕಾರ ಇದೆ. ಬಿಜೆಪಿಗರು ಸಂವಿಧಾನದ ವಿರೋಧಿಗಳು, ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ʻಶುದ್ಧೀಕರಣʼ ಹೇಳಿಕೆ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಸ್ಸಿ-ಎಸ್ಟಿ ಕಾಯ್ಡೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿರುವುದನ್ನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಜಾಗವನ್ನ ಉತ್ತರಖಂಡದವರು ಶುದ್ಧೀಕರಣ ಮಾಡಿದ್ದಾರೆ. ಸಂವಿಧಾನ ಅಸ್ಪೃಶ್ಯತೆಯನ್ನ ರದ್ದು ಮಾಡಿದೆ. ಆದ್ರೆ ದೇಶಕ್ಕೆ ಸ್ವಾತಂತ್ರ್ಯ ಬಂದು 80 ವರ್ಷಗಳಾಗುತ್ತಿದ್ದರೂ ಈ ರೀತಿ ಮಾಡಿರೋದು ಸಂವಿಧಾನದ ಆಶಯ ವಿರೋಧ ಮಾಡಿದಂತೆ. ಇದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ಮಾಡಿದ ಅಪಮಾನವಲ್ಲ, ದಲಿತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ಹೇಳಿದರು.
ಉತ್ತರಾಖಂಡದವರು ಮಾಡಿದ ತಪ್ಪನ್ನ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ. ಕಾನೂನಿನ ಪ್ರಕಾರ ಯಾರು ಶುದ್ಧೀಕರಣ ಮಾಡಿದ್ದಾರೋ ಅವರ ವಿರುದ್ಧ ಎಸ್ಸಿ -ಎಸ್ಟಿ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಆದ್ರೆ ಯಾವ ತಪ್ಪು ಮಾಡದ ರಾಹುಲ್ ಗಾಂಧಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಸಂವಿಧಾನದ ಪರ ಇರುವವರು, ಅಸ್ಪೃಶ್ಯತೆಯ ವಿರುದ್ಧ ಇರುವವರು ಎಂದು ಹೇಳಿದರು.
ಏನಾದ್ರೂ ಮಾಡಿ ರಾಹುಲ್ ಗಾಂಧಿ ಅವರನ್ನ ರಾಜಕೀಯವಾಗಿ ಮುಗಿಬೇಕು ಅಂತ ಕೇಂದ್ರ ಸರ್ಕಾರ ಹಾಗೂ ಬಿಜೆಪಿಯಿಂದ ಸಂಚು ನಡೆದಿದೆ. ರಾಹುಲ್ ಗಾಂಧಿ ಏನು ತಪ್ಪು ಮಾಡಿದ್ದಾರೆ? ಇದರ ವಿರುದ್ಧ ನಾವೆಲ್ಲ ಪ್ರತಿಭಟನೆ ಮಾಡಬೇಕು ಎಂದು ಕರೆ ನೀಡಿದರು. ರಾಹುಲ್ ಗಾಂಧಿ ಅವರ ಬಾಯಿ ಮುಚ್ಚಿಸಲು ಹೀಗೆ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹೇಗಾದ್ರೂ ಮಾಡಿ ರಾಹುಲ್ ಗಾಂಧಿ ಅವರನ್ನ ರಾಜಕೀಯವಾಗಿ ಮುಗಿಸಬೇಕೆಂದು ಸಂಚು ಮಾಡಿದೆ ಎಂದು ತಿಳಿಸಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ