ಬಿಜೆಪಿ, ಜನತಾ ದಳದವರಿಗೆ ನಮ್ಮ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ- ಡಿಸಿಎಂ ಡಿ.ಕೆ.ಶಿ

Webdunia
ಬುಧವಾರ, 7 ಜೂನ್ 2023 (15:21 IST)
ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ. 
 
ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ. 
 
ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ. ನಮ್ಮ ಯೋಜನೆ ಬಗ್ಗೆ ಮಾತನಾಡುವವರು ಮೊದಲು ಬಿಜೆಪಿಯವರ ಉದ್ಯೋಗ ಭರವಸೆ ಬಗ್ಗೆ ಮಾತಾಡಲಿ. ಎಲ್ಲರ ಖಾತೆಗೆ 15 ಲಕ್ಷ ಹಾಕಿಸಲಿ. ಆ ಬಗ್ಗೆ ಯಾಕೆ ಯಾರೂ ಕೇಳುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಸಾಧ್ಯವೇ?
 
ತೆರಿಗೆ ಪಾವತಿದಾರರು ನಿಮಗೆ ಮತ ಹಾಕಿಲ್ಲವೇ ಎಂದು ಕೇಳಿದಾಗ,ನಾವು ಬಡವರಿಗೆ ನೆರವು ನೀಡಲು ನಿರ್ಧರಿಸಿದ್ದೇವೆ. ತೆರಿಗೆ, ಜಿಎಸ್ಟಿ ಪಾವತಿದಾರರು ಈ ಯೋಜನೆ ಬೇಕು ಎಂದು ಕೇಳುತ್ತಿಲ್ಲ. ಅನೇಕರು ಈ ಯೋಜನೆ ಬೇಡ ಎಂದು ನಮಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಗ್ಯಾರಂಟಿ ವಿಚಾರದಲ್ಲಿ ಬಾಡಿಗೆ ಮನೆಯವರ ಬಗ್ಗೆ ಅಧಿಕಾರಿಗಳು ಒಂದು ಆಯಾಮ ನೀಡಿದ್ದರು. ಆದರೆ ನಾವು ಆ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments