Publish Date: Sat, 13 Jun 2020 (16:25 IST)
Updated Date: Sat, 13 Jun 2020 (16:27 IST)
ಅತ್ಯಾಚಾರಕ್ಕೆ ಯತ್ನ ಮಾಡಿದ ಕೇಸ್ ವೊಂದಕ್ಕೆ ಸಂಬಂಧ ಪಟ್ಟಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.
ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜೆಡಿಎಸ್ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಎರಡು ತಿಂಗಳ ಹಿಂದೆ ವೆಂಕಟೇಶ್ ಎಂಬಾತ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಕೇಸ್ ಗೆ ಸಂಬಂಧಪಟ್ಟಂತೆ ರಾಧಾಕೃಷ್ಣ ಮನೆಯವರು ಸಾಕ್ಷಿಗೆ ಸಹಿ ಮಾಡಿದ್ದರು.
ಹೀಗಾಗಿ ರಾಧಕೃಷ್ಣ ನ ಮೇಲೆ ವೆಂಕಟೇಶ ಬೆಂಬಲಿಗರು ಕಿಡಿಕಾರುತ್ತಿದ್ದರು. ಇದೀಗ ವೆಂಕಟೇಶ್ ಬೆಂಬಲಿಗರು ರಾಧಕೃಷ್ಣನ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.