Publish Date: Wed, 20 Sep 2023 (20:35 IST)
Updated Date: Wed, 20 Sep 2023 (19:38 IST)
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿರುವ ವಿಚಾರ ಕುರಿತು ಸಚಿವ K.H.ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಮೈತ್ರಿ ಮಾಡಿಕೊಳ್ಳುವುದು ಅವರ ವೈಯಕ್ತಿಕ ವಿಚಾರ.. ನಾವು 28 ಕ್ಷೇತ್ರಗಳಲ್ಲಿ ಗೆಲ್ಲುವ ಕೆಲಸ ಮಾಡಿದ್ದೇವೆ ಎಂದು ತಿಳಿಸಿದ್ರು.. ನಾಲ್ಕು ಕಾರ್ಯಕ್ರಮ ಜಾರಿ ಮಾಡಿದ್ದೇವೆ. ಇನ್ನೊಂದು ಕಾರ್ಯಕ್ರಮಕ್ಕೆ ಡಿಸೆಂಬರ್ವರೆಗೆ ಕಾಯಬೇಕು. ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಗಳಿಗೆ ಹಣದ ವ್ಯವಸ್ಥೆ ಮಾಡಿಕೊಂಡಿದ್ದಾರೆ.. 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬ ನಂಬಿಕೆ ನಮಗಿದೆ ಎಂದು ತಿಳಿಸಿದ್ರು.