Select Your Language

Notifications

webdunia
webdunia
webdunia
webdunia

ನಿರ್ಮಲಾನಂದ ಸ್ವಾಮಿಗಳ ಆಶೀರ್ವಾದ ಪಡೆದ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು

BJP-JDS candidates

Krishnaveni K

ಬೆಂಗಳೂರು , ಬುಧವಾರ, 10 ಏಪ್ರಿಲ್ 2024 (11:17 IST)
ಬೆಂಗಳೂರು: ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಇಂದು ಆದಿಚುಂಚನ ಗಿರಿ ಮಠಕ್ಕೆ ಭೇಟಿ ನೀಡಿ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
 

ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳಿಂದ ಅನೇಕ ಒಕ್ಕಲಿಗ ನಾಯಕರು ಸ್ಪರ್ಧೆ ನಡೆಸುತ್ತಿದ್ದಾರೆ. ತಮ್ಮ ಸಮುದಾಯದದವರನ್ನು ಸೆಳೆಯಲು ಮೈತ್ರಿ ಅಭ್ಯರ್ಥಿಗಳು ಸ್ವಾಮೀಜಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಸ್ವಾಮೀಜಿಗಳಿಗೆ ಸನ್ಮಾನಿಸಿದರು. ಜೊತೆಗೆ ಅಭ್ಯರ್ಥಿಗಳನ್ನೂ ಸ್ವಾಮೀಜಿ ಶಾಲು ಹೊದೆಸಿ ಸನ್ಮಾನಿಸಿ ಆಶೀರ್ವದಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಮಂಡ್ಯ ಲೋಕಸಭಾ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥನಾರಾಯಣ್, ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮಾಜಿ ಸಚಿವ ಜಿ.ಟಿ. ದೇವೇಗೌಡ, ಬಿಜೆಪಿ ಮಾಜಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮೊದಲ ಹಂತದ ಚುನಾವಣೆಗೆ ಸಂಬಂಧಿಸಿದ ಎನ್.ಡಿ.ಎ ಅಭ್ಯರ್ಥಿಗಳು ಇಂದು ವಿಜಯನಗರದ ಆದಿಚುಂಚನಗರಿ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ಶೇ.81.15 ಮಂದಿ ಉತ್ತೀರ್ಣ