Daily Horoscope
✕

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

Krishnaveni K
ಮಂಗಳವಾರ, 3 ಫೆಬ್ರವರಿ 2026 (21:41 IST)
ಬೆಂಗಳೂರು: ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ನಡೆಯುತ್ತಿದ್ದು ಇಂದು ರಾತ್ರಿ ಬಿಜೆಪಿ ಶಾಸಕರು ವಿಧಾನಸೌಧದಲ್ಲೇ ಮೊಕ್ಕಾಂ ಹೂಡಲಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈ ಸಂಬಂಧ ಇಂದು ಬಿಜೆಪಿ ಶಾಸಕರು ಸದನದಲ್ಲೇ ಇದ್ದು ಅಹೋರಾತ್ರಿ ಧರಣಿ ನಡೆಸಲಿದ್ದಾರೆ.

ಬಿಜೆಪಿ ಶಾಸಕರಿಗೆ ಜೆಡಿಎಸ್ ಶಾಸಕರೂ ಸಾಥ್ ನೀಡಿದ್ದಾರೆ. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಬಿವೈ ವಿಜಯೇಂದ್ರ, ‘ಅಬಕಾರಿ ಸಚಿವರ ಮೇಲೆ ನೇರ ಆರೋಪ ಬಂದಿದೆ. ಭ್ರಷ್ಟಾಚಾರದ ಆರೋಪ ಬಂದ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಅವರ ಬೆನ್ನಿಗೆ ನಿಂತಿದ್ದನ್ನು ನೋಡಿದರೆ ಅಬಕಾರಿ ಇಲಾಖೆಯ ಐದಾರು ಸಾವಿರ ಕೋಟಿ ಭ್ರಷ್ಟಾಚಾರದ ಹಗರಣದಲ್ಲಿ ಇಲ್ಲಿಗೆ ಪಾಲು ಹೋಗಿದ್ದಲ್ಲದೇ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೆ ಪಾಲು ಹೋಗಿರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಸಿದ್ದರಾಮಯ್ಯನವರ ಸರಕಾರ ಇಂಥ ಭಂಡತನ ಮಾಡುತ್ತಿದೆ. ಭ್ರಷ್ಟ ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು ಎಂದು ಮತ್ತೊಮ್ಮೆ ಆಗ್ರಹಿಸುವುದಾಗಿ ತಿಳಿಸಿದರು. ಅಬಕಾರಿ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಬಿಜೆಪಿ- ಜೆಡಿಎಸ್ ಇವತ್ತು ಅಹೋರಾತ್ರಿ ಧರಣಿ ನಡೆಸಲಿವೆ ಎಂದು ಅವರು ಪ್ರಕಟಿಸಿದರು’ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ಸಿನವರ ಅಧಿಕಾರದ ಮದ, ಅಹಂಕಾರವನ್ನು ಜನತೆ ಇಳಿಸುತ್ತಾರೆ: ಬಿವೈ ವಿಜಯೇಂದ್ರ

ದೀಪಾವಳಿಗೆ ಪಟಾಕಿ ಸಿಡಿಸಬೇಡಿ ಎನ್ನುವ ಸೆಲೆಬ್ರಿಟಿಗಳ ನಡುವೆ ವಿಭಿನ್ನ ಕರೆ ನೀಡಿದ ಕೆ ಅಣ್ಣಾಮಲೈ

ಇ20 ಈಗ 420 ಆಗಿದೆ, ಅತಿಯಾಗಿ ಕದ್ದು ಎಥನಾಲ್ ಬಳಸಲಾಗ್ತಿದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪ

ಬೆಂಗಳೂರು ಸರಣಿ ಹತ್ಯೆ ಪ್ರಕರಣ: 7 ಜನರ ಕೊಲೆ ಎಸಗಿದ್ದ ಕ್ಯಾಬ್ ಚಾಲಕನ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ

ದೀಪಾವಳಿ ಹಬ್ಬಕ್ಕೆ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments