Select Your Language

Notifications

webdunia
webdunia
webdunia
webdunia

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

Randeep Surjewala

Krishnaveni K

ಬೆಂಗಳೂರು , ಬುಧವಾರ, 16 ಜುಲೈ 2025 (17:50 IST)
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಸೇರಿಕೊಂಡು ಬೆಂಗಳೂರಿನ ಪರಿಸರ ಮತ್ತು ಜೀವ ಪರಿಸರವನ್ನು ಹಾಳು ಮಾಡುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.

 ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಅಹವಾಲುಗಳನ್ನು ಕೇಳಲು ಬೀಡುಬಿಟ್ಟಿರುವ ಅವರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ‘ಹವಾನಿಯಂತ್ರಿತ ನಗರ, ಉದ್ಯಾನನಗರ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರು "ಕಾಂಕ್ರೀಟ್ ಶಾಖದ ಸುಳಿಗೆ" ಸಿಲುಕುತ್ತಿದೆ.  ಇದರ ನಡುವೆಯೇ ನಾನು ಕರ್ನಾಟಕ ರಾಜ್ಯ ಅರಣ್ಯ ಸಚಿವ  ಈಶ್ವರ ಖಂಡ್ರೆ ಅವರೊಂದಿಗೆ ನಡೆಸಿದ ಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರ ಹಾಗೂ ಬಿಜೆಪಿ-ಜೆಡಿಎಸ್ ಬೆಂಗಳೂರಿನ ಪರಿಸರ ಹಾಗೂ ಜೀವ ಪರಿಸರವನ್ನು ಹೇಗೆ ನಾಶಪಡಿಸುತ್ತಿದೆ ಎಂಬ ಬಗ್ಗೆ ಆಘಾತಕಾರಿ ವಿಷಯಗಳು ಹೊರಬಂದಿವೆ.

1960 ರ ದಶಕದಲ್ಲಿ ಕರ್ನಾಟಕ ಸರ್ಕಾರವು ಬೆಂಗಳೂರಿನ ಹೃದಯಭಾಗದಲ್ಲಿರುವ ಗೋರಗುಂಟೆ ಪಾಳ್ಯದ ಬಳಿ ಕಾರ್ಖಾನೆಗಾಗಿ ಎಚ್.ಎಂ.ಟಿ ಸಂಸ್ಥೆಗೆ 443 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಾರ್ಖಾನೆ ಕಳೆದ 15 ವರ್ಷಗಳಿಂದಲೂ ಸ್ಥಗಿತಗೊಂಡಿದೆ.

ಈ ಜಮೀನಿನಲ್ಲಿ ಅವರು 160 ಎಕರೆಯನ್ನು ಈಗಾಗಲೇ ಮಾರಾಟ ಮಾಡಿದ್ದಾರೆ. ಉಳಿದ 280 ಎಕರೆ ಜಾಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಅರಣ್ಯ ಇಲಾಖೆಯು ಕಬ್ಬನ್ ಪಾರ್ಕ್ ನಂತೆ ' ಜೀವ ವೈವಿಧ್ಯತೆ ಉದ್ಯಾನವನ' ನಿರ್ಮಿಸಲು ಉದ್ದೇಶಿಸಿದೆ. ಇದು ಬೆಂಗಳೂರು ನಾಗರೀಕರ ಉಸಿರಾಟದ ಆರೋಗ್ಯ ಕಾಪಾಡುವ ಎರಡನೇ ಶ್ವಾಸಕೋಶ ದಂತೆ ನೆರವಾಗುತ್ತಿತ್ತು.

ಆದರೆ ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿಯ ಮೋದಿ ಸರ್ಕಾರ ಮತ್ತು ಎಚ್.ಡಿ ಕುಮಾರಸ್ವಾಮಿ ಅವರು 280 ಎಕರೆ ಭೂಮಿಯನ್ನು "ರಿಯಲ್ ಎಸ್ಟೇಟ್ ಅಭಿವೃದ್ಧಿಗಾಗಿ" ಮಾರಾಟ ಮಾಡಲು ಮುಂದಾಗಿವೆ.

ಈ ಜಮೀನಿಗಾಗಿ ಕರ್ನಾಟಕ ಸರ್ಕಾರ ಮತ್ತು ಕೇಂದ್ರದ ಮೋದಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ಮಾಡುತ್ತಿದ್ದು, ಪ್ರಕರಣ ಜುಲೈ 27ಕ್ಕೆ ವಿಚಾರಣೆಗೆ ಬರಲಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರವು ಭೂಮಿಯಲ್ಲಿ ಕಬ್ಬನ್ ಪಾರ್ಕ್‌ನಂತಹ ಜೈವಿಕ ವೈವಿಧ್ಯತೆಯ ಉದ್ಯಾನವನ ನಿರ್ಮಿಸಲು ಬಯಸಿದರೆ, ಬಿಜೆಪಿ-ಜನತಾದಳ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಧಾರೆ ಎರೆಯಲು ಸಿದ್ಧವಾಗಿವೆ’ ಎಂದು ಆರೋಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಟರಿ ಸಿದ್ದರಾಮಯ್ಯರಿಂದ ವಿಶ್ವಾಸ ಕಳೆದುಕೊಂಡು ಹೈಕಮಾಂಡ್‌ ರಣದೀಪ್ ಆಡಳಿತ ಹೇರಿದೆ: ಆರ್‌ ಅಶೋಕ್ ವ್ಯಂಗ್ಯ