Select Your Language

Notifications

webdunia
webdunia
webdunia
webdunia

ಮತಎಣಿಕೆ: ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್ 9 ಮುನ್ನಡೆ, ಜೆಡಿಎಸ್ 1

ಮತಎಣಿಕೆ: ಬಿಜೆಪಿ 17 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್ 9 ಮುನ್ನಡೆ, ಜೆಡಿಎಸ್ 1
, ಶುಕ್ರವಾರ, 16 ಮೇ 2014 (09:21 IST)
ಬೆಂಗಳೂರು:ಲೋಕಸಭೆ ಚುನಾವಣೆಯ ಮತಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದ್ದು, ಬಿಜೆಪಿ ಕರ್ನಾಟಕದ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ 2  ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.   ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ 50,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಮೈಸೂರಿನಲ್ಲಿ ವಿಶ್ವನಾಥ್  ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ  ಅವರನ್ನು ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.

 
webdunia
ಮಂಗಳೂರು ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಹಿನ್ನಡೆ ಅನುಭವಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿಯ ಯಡಿಯೂರಪ್ಪ 61,822 ಮತಗಳನ್ನು ಗಳಿಸಿದ್ದು, 30,187 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.  ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ದೇವೇಗೌಡರು ಮುನ್ನಡೆ ಕಾಯ್ದುಕೊಂಡಿದ್ದಾರೆ.  ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಹಿನ್ನಡೆ ಅನುಭವಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಿಜ್ವಾನ್ ಮುನ್ನಡೆ ಸಾಧಿಸಿದ್ದಾರೆ.

webdunia
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಅನಂತಕುಮಾರ್ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್‌ನ ನಂದನ್ ನಿಲೇಕಣಿ ಹಿನ್ನಡೆ ಅನುಭವಿಸಿದ್ದಾರೆ. ಬಳ್ಳಾರಿಯಲ್ಲಿ ಒಂದೇ ಸುತ್ತಿನ ಮತಎಣಿಕೆಯಲ್ಲಿ 1200 ಮತಗಳು ನೋಟಾದಲ್ಲಿ ದಾಖಲೆಯಾಗಿದೆ. ತುಮಕೂರಿನಲ್ಲಿ  ಜೆಡಿಎಸ್‌ನ ದಿವಂಗತ ಕೃಷ್ಣಪ್ಪ ಮುನ್ನಡೆ ಸಾಧಿಸಿದ್ದಾರೆ. ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗುಲ್ಬರ್ಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುನ್ನಡೆ ಸಾಧಿಸಿದ್ದಾರೆ.  ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ಪುಟ್ಟರಾಜು ಮುನ್ನಡೆ ಕಾಯ್ದುಕೊಂಡಿದ್ದಾರೆ. 


Share this Story:

Follow Webdunia kannada